Thanks to all my well wishers who wished me on my birthday., 11/07/2026
ನನ್ನ ಜನ್ಮದಿನದಂದು ಶುಭ ಕೋರಿದ ನನ್ನ ಎಲ್ಲಾ ಹಿತೈಷಿಗಳಿಗೆ ಧನ್ಯವಾದಗಳು.

A sweet journey of sweet bonding., 11/07/2026
ಸುಮಧುರ ಬಾಂಧವ್ಯದ ಸವಿದಾದ ಪಯಣ.

Third-Year Development Report Released at Public Function, 11/07/2026
ಮೂರನೇ ವರ್ಷದ ಅಭಿವೃದ್ಧಿ ಕಾಮಗಾರಿಗಳ ದಾಖಲೆಯಾದ ವಾಗ್ದಾನ ಅನುಷ್ಠಾನ ಪುಸ್ತಕ ಬಿಡುಗಡೆಗೊಳಿಸಲಾಯಿತು.
ಈ ಸಮಾರಂಭದಲ್ಲಿ ಧರ್ಮ ಗುರುಗಳು, ನನ್ನ ಧರ್ಮಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ, ನನ್ನ ಸಹೋದರರಾದ ಶ್ರೀ ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Kanchan Ponnanna Joins Birthday Visit to Heggala Old Age Home, 11/07/2026
ವಿರಾಜಪೇಟೆಯ ಹೆಗ್ಗಳ ಗ್ರಾಮದಲ್ಲಿರುವ ವೃದ್ಧಾಶ್ರಮಗಳಿಗೆ ನನ್ನ ಧರ್ಮಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ ರವರೊಂದಿಗೆ ಭೇಟಿ ನೀಡಿ ನಿವಾಸಿಗಳೊಂದಿಗೆ ಮಾತನಾಡಿದೆ. ಈ ಸಂದರ್ಭದಲ್ಲಿ ನನ್ನ ಜನ್ಮದಿನ ಪ್ರಯುಕ್ತ ಅವರುಗಳ ಹಾರೈಕೆ ಹಾಗೂ ಆಶೀರ್ವಾದ ಪಡೆದೆ.

New Gonikoppa Bus Stand Inaugurated, 11/07/2026
ಪೊನ್ನಂಪೇಟೆ ತಾಲೂಕು ಗೋಣಿಕೊಪ್ಪ ಭಾಗದಲ್ಲಿ ನಿರ್ಮಾಣಗೊಂಡಿರುವ ನೂತನ ಬಸ್ ನಿಲ್ದಾಣವನ್ನು ನನ್ನ ಧರ್ಮಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ ಹಾಗೂ ನನ್ನ ಸಹೋದರರಾದ ಶ್ರೀ ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ ಅವರೊಂದಿಗೆ ಉದ್ಘಾಟನೆ ನೇರೆವೇರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಡೆಪಂಡ ಸುಜಾ ಕುಶಾಲಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರಾದ ಮಿದೇರಿರ ನವೀನ್, ಗೋಣಿಕೊಪ್ಪ ಪಂಚಾಯತ್ ಅಧ್ಯಕ್ಷರಾದ ಕುಲ್ಲಚಂಡ ಪ್ರಮೋದ್ ಗಣಪತಿ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.
