Development Work Progresses at New Ambedkar Bhavan, 07/07/2026

ವಿರಾಜಪೇಟೆ ತಾಲೂಕು ಅಮ್ಮತಿ ಹೋಬಳಿ ಕರ್ಮಾಡು ಪಂಚಾಯಿತಿ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಅಂಬೇಡ್ಕರ್ ಭವನದ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ.

 


Natural Disaster Management Reviewed at Zilla Panchayat Meeting, 06/07/2026

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಕೃತಿ ವಿಕೋಪ ನಿರ್ವಹಣೆ ಹಾಗೂ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾನ್ಯ ಅರೋಗ್ಯ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ಅವರೊಂದಿಗೆ ಭಾಗವಹಿಸಿ ಎಲ್ಲಾ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದು ಚರ್ಚಿಸಿ ಅಧಿಕಾರಿಗಳಿಗೆ ಪ್ರಕೃತಿ ವಿಕೋಪ ನಿರ್ವಹಣೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಸೂಚನೆ ನೀಡಲಾಯಿತು.

 


Health Minister U.T. Khader Receives Grand Welcome at General Thimmaiah Circle, 06/07/2026

ಕರ್ನಾಟಕ ರಾಜ್ಯ ಘನ ಸರಕಾರದ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ಯು ಟಿ ಖಾದರ್ ರವರು ಸಚಿವರಾದ ಬಳಿಕ ಮೊದಲ ಬಾರಿಗೆ ಮಡಿಕೇರಿಗೆ ಆಗಮಿಸಿದ ಸಂದರ್ಭ ಅವರನ್ನು ಜನರಲ್ ತಿಮ್ಮಯ್ಯ ವೃತ್ತದ ಬಳಿ ಸ್ವಾಗತಿಸಿದ ಸಂದರ್ಭ.

 


Ponnira Ain House Road Work Successfully Completed, 06/07/2026

ವಿರಾಜಪೇಟೆ ತಾಲೂಕು, ಬಿಟ್ಟಂಗಾಲ ಗ್ರಾಮದ ಪೊನ್ನಿರ ಐನ್ ಮನೆಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದೆ.


SIR Application Submitted at Belluru Residence; Calls for Better Leadership, 06/07/2026

ರಾಜ್ಯಾದಂತ ನಡೆಯುವತ್ತಿರುವ ಎಸ್ಐಆರ್ ಕಾರ್ಯಕ್ರಮದ ಭಾಗವಾಗಿ ಇಂದು ಪೊನ್ನಂಪೇಟೆ ತಾಲೂಕು ಹುದಿಕೇರಿಯ ಬೆಳ್ಳೂರಿನಲ್ಲಿರುವ ನಿವಾಸದಲ್ಲಿ ಅರ್ಜಿ ಭರ್ತಿ ಮಾಡುವ ಮೂಲಕ, ಈ ಪ್ರಕ್ರಿಯೆಯಲ್ಲಿ ಭಾಗವಹಿಸಿದೆ.
ಬಳಿಕ ಸಾರ್ವಜನಿಕರಿಗೆ ನೀಡಿದ ಸಂದೇಶದಲ್ಲಿ, ಉತ್ತಮ ಸಮಾಜ ನಿರ್ಮಾಣಕ್ಕೆ ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು. ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಲು ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಇರಲೇಬೇಕು. ಮತದಾನ ಎಂಬುವುದು ಪ್ರತಿಯೊಬ್ಬ ಭಾರತೀಯ ನಾಗರಿಕನ ಪ್ರಮುಖ ಹಕ್ಕು ಮತ್ತು ಇದನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ ಹಾಗೂ ಯಾರೂ ಇದನ್ನು ಕಸಿದುಕೊಳ್ಳದಂತೆ ನಾವುಗಳು ಜಾಗೃತಿ ವಹಿಸಿಕೊಳ್ಳಬೇಕು. ಹಾಗಾಗಿ ಪ್ರತಿಯೊಬ್ಬರೂ ಅಗತ್ಯ ದಾಖಲೆಗಳನ್ನು ನೀಡಿ ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ ಎಂದು ತಿಳಿಸಲಾಯಿತು